ಜಿ.ಟಿ.ದೇವೆಗೌಡ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಅಟ್ರಾಸಿಟಿ ಮೊಕದ್ದಮೆ ದಾಖಲಿಸಲು ಆಗ್ರಹಿಸಿ ಕರ್ನಾಟಕ ಸಂವಿಧಾನ ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಶುಕ್ರವಾರ ನಗರದ ಸಂಜಯ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪ್ರಸ್ತುತವಾಗಿ ನಡೆಯುತಿರುವ ಅಧಿವೇಶನದಲ್ಲಿ - ಸಹಕಾರ ಮಸೂದೆಯನ್ನು ಸರ್ಕಾರವು ಮಂಡಿಸಿದಾಗ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ ಟಿ ದೇವೇಗೌಡರವರು ಸಹಕಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡುವ ಮೂಲಕ ಸಹಕಾರ ಕ್ಷೇತ್ರವನ್ನು ಮುಳುಗಿಸಿಬಿಡಿ, ಸರ್ವನಾಶ ಮಾಡಿಬಿಡಿ ಎಂದು ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.