ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಕೋಮು ಸೂಕ್ಷ್ಮ ಪ್ರದೇಶವಾಗಿರುವ ರಾಗಿಗುಡ್ಡದಲ್ಲಿ ಪೊಲೀಸ್ ಬಿಗಿ ಭದ್ರತೆಯ ನಡುವೆ ಭಾನುವಾರ ಗಣಪತಿ ವಿಸರ್ಜನಾ ಮೆರವಣಿಗೆ ನಡೆಯುತ್ತಿದೆ. 2023ರಲ್ಲಿ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕೋಮು ಗಲಭೆ ಉಂಟಾಗಿತ್ತು ಅದಾದ ಬಳಿಕ ಇರುವರೆಗೂ ಶಾಂತಿಯುತವಾಗಿ ಎಲ್ಲಾ ಹಬ್ಬ ಹರಿದಿನಗಳು ನಡೆಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.ಬರೋಬ್ಬರಿ 17 ಗಣಪತಿಗಳ ರಾಜಭೀತಿ ಉತ್ಸವ ನಡೆಯುತ್ತಿದ್ದು, ಯುವಕ ಯುವತಿಯರು ಕುಣಿದು ಕುಪ್ಪಳಿಸಿದರು.