ಹನೂರು ತಾಲೂಕಿನ ಎಲ್ಲೆಮಾಳ ಸಮೀಪದ ಮಹದೇಶ್ವರ ಬೆಟ್ಟ ಮುಖ್ಯರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಶ್ರೀಧರ್ ಕೆ ಎಂಬುವವರು ಮಲೆಮಹದೇಶ್ವರ ಬೆಟ್ಟದಿಂದ ಹಿಂತಿರುಗುತ್ತಿದ್ದಾಗ, ಅವರ ಕೆಎ 05 ಎಂ ಜೆ 9637 ನಂಬರ್ ನ ಕಾರಿಗೆ ಎಲ್ಲೆಮಾಳದ ಸಮೀಪ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಭಸ್ಮವಾಗಿದೆ. ಘಟನೆಯ ಮಾಹಿತಿ ಪಡೆದ ಹನೂರು ಅಗ್ನಿಶಾಮಕ ಠಾಣೆಯ ಪ್ರಭಾರ ಠಾಣಾಧಿಕಾರಿ ಮಹೇಶ್ ಅವರು ಸಿಬ್ಬಂದಿಗಳಾದ ರವಿ, ಆನಂದ್, ಜಯಪ್ರಕಾಶ್, ಅಶೋಕ್ ಹಾಗೂ ಬಸವರಾಜು ಅವರೊಂದಿಗೆ ಸ್ಥಳಕ್ಕಾಗಮಿಸಿ ತಕ್ಷಣ ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ತೊಡಗಿ ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ