ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿ ಪಂ ಕಾವೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದ ಮೆರವಣಿಗೆ ಗೆ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಗಳು ಶ್ರೀ ರಂಗನಾಥ್ ದೇವಸ್ಥಾನದ ಮುಂಭಾಗದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಶ್ರೀರಂಗಪಟ್ಟಣ ದಸರಾ ಮೆರವಣಿಗೆ, ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು.