ಕೆಂಪನಪುರ ಗ್ರಾಮದ ನಿವಾಸಿ ಮಹದೇವಸ್ವಾಮಿ ಎಂಬುವವರು ಕಾಣೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ. ೪೧ ವರ್ಷದ ಮಹದೇವಸ್ವಾಮಿ ೫.೩ ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ತುಂಬು ತೋಳಿನ ಶರ್ಟ್ ಮತ್ತು ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಇವರ ಸುಳಿವು ದೊರೆತಲ್ಲಿ ಸಂತೇಮರಹಳ್ಳಿ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.