ಗೌರಿ ಗಣೇಶ ಹಬ್ಬವನ್ನು ಜನತೆ ಶಾಂತಿ ಸೌಹಾರ್ದಯುತವಾಗಿ ಆಚರಿಸಲು ಪೊಲೀಸ್ ಇಲಾಖೆಯ ಅಗತ್ಯ ಕ್ರಮ ಕೈಗೊಂಡಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಯಾರಾದರೂ ಅನುಮಾನಸ್ಪಾದ ವ್ಯಕ್ತಿಗಳು ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಹೊಸನಗರದಲ್ಲಿ ಎಸ್ಪಿ ಮಿಥುನ್ ಕುಮಾರ್ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಹೊಸನಗರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಮುಂಬರುವ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ತಾಲೂಕು ಆಡಳಿತ ಪೊಲೀಸ್ ಇಲಾಖೆ ವತಿಯಿಂದ ಜನಜಾಗೃತಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಎಸ್ಪಿ ಮಿಥುನ್ ಕುಮಾರ್ ಈ ರೀತಿ ತಿಳಿಸಿದ್ದಾರೆ.