ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಚನ್ನರಾಯಪಟ್ಟಣ : ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಹಿರಿಸಾವೆ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರುಗಡೆಯಿಂದ ಬರುತ್ತಿದ್ದ ಟ್ಯಾಂಕರ್ ಲಾರಿಗೆ ಡಿಕ್ಕಿಯಾಗಿದೆ, ಅದೃಷ್ಟವಶಾತ್ ಏರ್ ಬ್ಯಾಗ್ ತೆರೆದ ಕಾರಣ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಘಟನೆಯಿಂದಾಗಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಹಿರಿಸಾವೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.