ವಿವಿಧ ಸಂಘಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಉಚಿತ ಸಮಗ್ರ ಆರೋಗ್ಯ ತಪಾಸಣೆ ಹಾಗೂ ಸ್ವಯಂಪ್ರೇರಿತ ರಕ್ತದಾನ ಬಹಳ ಯಶಸ್ವಿಯಾಗಿ ನಡೆಯಿತು. ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ , ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರಾಷ್ಟ್ರೀಯ ಕ್ಷಯ ನಿರ್ಮೂಲನಾ ಕಾರ್ಯಕ್ರಮ, ರೆಹ್ಬರ್ ಅಸೋಸಿಯೇಷನ್, ದ್ವಿಚಕ್ರ ವಾಹನ ಮೆಕ್ಯಾನಿಕ್ ಅಸೋಸಿಯೇಷನ್, ಆಟೋಮೋಟಿವ್ ಅಸೋಸಿಯೇಷನ್ ಇವರ ವತಿಯಿಂದ ಉಚಿತ ಸಮಗ್ರ ಆರೋಗ್ಯ ತಪಾಸಣೆ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರ ಬಹಳ ಯಶಸ್ವಿಯಾಗಿ ನಡೆಯಿತು.