ಬಿಜೆಪಿ ಧರ್ಮಸ್ಥಳ ಯಾತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿಗೆ ಅನುಮತಿ ಕೊಡಿಸಲಿ ಎಂದಿದ್ದಾರೆ. ಈ ಕುರಿತು ಭಾನುವಾರ ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಧರ್ಮಸ್ಥಳಕ್ಕೆ ಹೋಗಿ ತಮ್ಮ ವೈಯಕ್ತಿಕ ಲಾಭಕ್ಕೆ ಪ್ರಾರ್ಥನೆ ಮಾಡಿಕೊಂಡು ಬರುತ್ತಾರೆಯೇ ಹೊರತು ಬೇರೇನೂ ಇಲ್ಲ. ಇವರ ಹೋರಾಟ ಧರ್ಮಸ್ಥಳದಲ್ಲಿ ಅಲ್ಲ, ಎಲ್ಲಾ ಸಂಸದರು, ಶಾಸಕರನ್ನು ಕರೆದುಕೊಂಡು ಹೋಗಿ ದೆಹಲಿಯಲ್ಲಿ ಹೋರಾಟ ಮಾಡಬೇಕು. ರಾಜ್ಯಕ್ಕೆ ಅನುದಾನ ತರಬೇಕು ಎಂದು ಛೇಡಿಸಿದರು.