ಔರಾದ್ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಜನರೊಂದಿಗೆ ನಿತ್ಯ ವ್ಯವಹರಿಸುವ ಇಲಾಖೆಯಾಗಿದ್ದು ಪಿಡಿಒಗಳು ಗ್ರಾಮೀಣ ಪ್ರದೇಶದ ಜನತೆಯ ಸಮಸ್ಯೆಗಳಿಗೆ ಸ್ಪಂದನಶೀಲರಾಗಿ ಪ್ರತಿಕ್ರಿಯಿಸಬೇಕು ಎಂದು ಬೀದರ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ದಿಲೀಪ್ ಬದೋಲೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ಗುರುವಾರ ಮಧ್ಯಾಹ್ನ 1 ಗಂಟೆಗೆ ಔರಾದ್ ತಾಲೂಕಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.