ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುಸ್ಟೂರ ಗ್ರಾಮದಲ್ಲಿ ಮಳೆಯಿಂದ ರಸ್ತೆಯಲ್ಲಿ ಗುಂಡಿ ಬಿದ್ದು ಟ್ರ್ಯಾಕ್ಟರ್ ನ ಗುಂಡಿಯಲ್ಲಿ ಸಿಲುಕಿ ಅಪಘಾತವಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಗ್ರಾಮದ ರೈತ ಈರಣ್ಣ ಎನ್ನುವವರಿಗೆ ಸೇರಿದ ಟ್ರ್ಯಾಕ್ಟರ್ ಸಿಲುಕಿ ಪಲ್ಟಿ ಯಾಗುವ ಹಂತದಲ್ಲಿ ಚಾಲಕ ಮತ್ತು ಕಾರ್ಮಿಕರು ಟ್ರ್ಯಾಕ್ಟರ್ ನಿಂದ ಜಿಗಿದು ಪ್ರಾಣಪಾಯ ದಿಂದ ಪಾರಾಗಿದ್ದಾರೆ. ರಸ್ತೆ ಸಂಪೂರ್ಣ ಹಾಳಾಗಿದ್ದರಿಂದ ಇಂತಹ ಒಂದು ಘಟನೆ ನಡೆದಿದ್ದು ಕೂಡಲೇ ರಸ್ತೆ ದುರಸ್ತಿಗೊಳಿಸಬೇಕು ಎಂದು ಗ್ರಾಮದ ಜನರು ಒತ್ತಾಯಿಸುತ್ತಿದ್ದು,ರಸ್ತೆ ದುರಸ್ತಿ ಮಾಡದಿದ್ದಲ್ಲಿ ಈ ರೀತಿಯ ಘಟನೆಗಳು ನಡೆದು ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಗ್ರಾಮ ಪಂಚಾಯಿತಿ ಕಾರಣವಾಗಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.