ರಾಮನಗರ -- ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧುವಾರ ಸಂಜೆ 6:30 ರ ಸಮಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿಗಳಾದ ಆರ್. ಚಂದ್ರಯ್ಯ ಮಾತನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಕೇಂದ್ರಗಳ ಕಾರ್ಯ ನಿರ್ವಹಣೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದು ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ನಿಗಧಿತ ಗುರಿಯನು