ಶುಕ್ರವಾರ ಮಧ್ಯಾಹ್ನ 2.50ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಎಂಪಿ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ಜಲ ಜೀವನ್ ಮಿಷನ್ ಕಾಮಗಾರಿಗಳಲ್ಲಿ ವಿಳಂಬ ಮತ್ತು ಕಳಪೆ ಗುಣಮಟ್ಟದ ಕುರಿತು ದೂರುಗಳು ಬರುತ್ತಿದೆ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚಿಸಿದರು. ಕಾಮಗಾರಿಯನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸುವಂತೆ ಹಾಗೂ ಗುತ್ತಿಗೆದಾರರಿಗೆ ಕಾಮಗಾರಿ ಮುಕ್ತಾಯ ಸಮಯ ನಿಗಧಿಗೊಳಿಸಿ ಅವರ ವಿರುದ್ದ ಬಿಗು ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮುಂದಿನ ಹಂತದಲ್ಲಿ ಇನ್ನೂ 800 ಹಳ್ಳಿಗಳಿಗೆ ಜಲ ಜೀವನ್ ಯೋಜನೆಯ ಸಂಪರ್ಕ ನೀಡಲು ಬಾಕಿಯಿದ್ದು ಇದನ್ನೂ ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ತಿಳಿಸಿದರು.