ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನೇತೃತ್ವದಲ್ಲಿ ಮನೆ ಮನೆಗೆ ಪೊಲೀಸ್ ಯೋಜನೆ ಜಾರಿಗೆ ತರಲಾಗಿದ್ದು, ಬರ್ಜರಿ ರೆಸ್ಪಾನ್ಸ್ ಸಿಕ್ಕಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಡಿ ಅವರು ಶನಿವಾರ ಎಂಟು ಗಂಟೆಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಜುಲೈ 12ರಿಂದ ಸೆಪ್ಟೆಂಬರ್ 12ರವರೆಗೆ ನಡೆದ ಈ ಕಾರ್ಯಕ್ರಮದಲ್ಲಿ 240 ಬೀಟ್‌ಗಳ ಪೊಲೀಸ್ ಸಿಬ್ಬಂದಿ ಒಟ್ಟು 13,838 ಮನೆಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಿದ್ದಾರೆ. ಮನೆಗೆ ಬಂದ ಪೊಲೀಸ್ ಸಿಬ್ಬಂದಿಗೆ ಸಾರ್ವಜನಿಕರು ನೇರವಾಗಿ ತಮ್ಮ ಅಹವಾಲು ಮತ್ತು ಸಮಸ್ಯೆಗಳನ್ನು ಹಂಚಿಕೊಳ್ಳುವ ಅವಕಾಶವನ್ನು ಬಳಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ