ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು .ಬಾಲಚಂದ್ರನ್ ಅಧಿಕಾರಿಗಳಿಗೆ ಸೂಚಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಗಸ್ಟ್ 28- ರಂದು ಮಧ್ಯದಲ್ಲಿ 2-30 ಗಂಟೆಗೆ ಕಿನ್ನಾಳ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ದೇವರಾಜ ನಡುವಿನಮನಿ, ಪರಶುರಾಮ ಭಜೆಂತ್ರಿ, ಮಾನ್ವಿ ಪಾಶಾ, ರಾಮಣ್ಣ ಚೌಡ್ಕಿ ಸದಸ್ಯರು ಗ್ರಾಮ ಪಂಚಾಯತ ಅಧ್ಯಕ್ಷೆ ಶ್ವೇತಾ ಡಂಬಳ, ಉಪಾಧ್ಯಕ್ಷ ದುರಗಪ್ಪ ಡಂಬರ, ಪಂಚ ಗ್ಯಾರಂಟಿ ಯೋಜನೆಗಳ ಇಲಾಖಾಧಿಕಾರಿಗಳು, ಪಂಚಾಯತ ಅಭಿವೃದ್ದಿ ಅಧಿಕಾರಿ ಪರಮೇಶ್ವರಯ್ಯ, ಗ್ರಾಮ ಪಂಚಾಯತಿ ಸರ್ವ ಸದಸ್ಯರು ತಾಲೂಕ ಪಂಚಾಯತಿ ಸಿಬ್ಬಂದಿಗಳು* ಹಾಜರಿದ್ದರು