Download Now Banner

This browser does not support the video element.

ಚಳ್ಳಕೆರೆ: ನಗರದಲ್ಲಿ ಶ್ರೀ ಕೃಷ್ಣ ಜಯಂತಿ ಮೆರವಣಿಗೆಯಲ್ಲಿ ಶಾಸಕ ಟಿ.ರಘುಮೂರ್ತಿ ಭಾಗಿ

Challakere, Chitradurga | Aug 24, 2025
ನಗರದಲ್ಲಿ ಭಾನುವಾರ ಶ್ರೀಕೃಷ್ಣ ಜಯಂತಿ ಅದ್ದೂರಿಯಾಗಿ ಸಡಗರ, ಸಂಭ್ರಮದಿಂದ ಆಚರಣೆ ಮಾಡಲಾಯಿತು. ನಗರದ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿಯಿಂದ ಶ್ರೀಕೃಷ್ಣ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಪ್ರತಿಷ್ಠಾಪನೆ ಮಾಡಿಕೊಂಡು ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿಯವರು ಭಾಗವಹಿಸಿ ಶ್ರೀಕೃಷ್ಣನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು. ಈ ವೇಳೆ ಜಿಪಂ ಮಾಜಿ ಸದಸ್ಯ ರವಿಕುಮಾರ್ ಹಾಗು ಯಾದವ ಸಮಾಜದ ಮುಖಂಡರು ಇದ್ದರು.
Read More News
T & CPrivacy PolicyContact Us