ಬಾನು ಮುಷ್ತಾಕ್ ಕನ್ನಾಡಂಭೆ ಕುರಿತ ಹೇಳಿಕೆಗೆ ಮೊದಲು ಸ್ಪಷ್ಟನೆ ಕೊಡಲಿ. ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ನನ್ನ ವಿರೋಧ ಇದೆ. ಮೈಸೂರಿನ ಸುತ್ತೂರು ಮಠದಲ್ಲಿ ಯದುವೀರ್ ಹೇಳಿಕೆ. ಈ ಹಿಂದೆ ಬಾನು ಮುಷ್ತಾಕ್ ಆಯ್ಕೆಯನ್ನ ಸ್ವಾಗತಿಸಿದ್ದ ಯದುವೀರ್. ಸರ್ಕಾರ ಅವರನ್ನ ಆಯ್ಕೆ ಮಾಡಿದಾಗ ನಾನು ಸ್ವಾಗತಿಸಿದ್ದೆ. ಅವರ ಹಳೇ ಭಾಷಣ ನಂತರ ನೋಡಿದ್ದೇನೆ. ಆ ಭಾಷಣಕ್ಕೆ ಸ್ಪಷ್ಟೀಕರಣ ಬೇಕು. ಸ್ಪಷ್ಟೀಕರಣ ಕೊಡಲಿ ಅಥವಾ ಹೇಳಿಕೆಯನ್ನ ವಾಪಸ್ ಪಡೆಯಲಿ. ಎರಡು ಮಾಡದಿದ್ದರೆ ನನ್ನ ವಿರೋಧ ಇದೆ. ಪಾರ್ಟಿಯ ನಿರ್ಧಾರವೇ ನಮ್ಮ ನಿರ್ಧಾರ. ಪಾರ್ಟಿಗೆ ವಿರುದ್ಧ ನಿಲುವು ನನ್ನದಲ್ಲ. ಭುವನೇಶ್ವರಿ ಕುರಿತ ಬಾನು ಮುಷ್ತಾಕ್ ಹೇಳಿಕೆಯಿಂದ ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ. ಅದನ್ನ ಮುಷ್ತಾಕ್ ಅರ್ಥ ಮಾಡಿಕೊಳ್ಳಬೇಕು.