ಶುಕ್ರವಾರ 2 ಗಂಟೆಗೆ ಕಲಬುರಗಿಯಲ್ಲಿ ಮಾತನಾಡಿದ ಕರ್ನಾಟಕ ಸಂಘಟನಾ ವೇದಿಕೆಯ ರಾಜ್ಯಾಧ್ಯಕ್ಷ ಗುರು ಬಂಡಿ, ಮಕ್ಕಳ ಸುರಕ್ಷತೆಗಾಗಿ ಖಾಸಗಿ ಶಾಲಾ ವಾಹನಗಳ ವೇಗವನ್ನು ಗಂಟೆಗೆ 40 ಕಿಲೋಮೀಟರ್‌ಗೆ ಮಿತಿಗೊಳಿಸುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ತಕ್ಷಣ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿದರು. ಕಳೆದ ಒಂದು ವರ್ಷದಲ್ಲಿ ಅತಿವೇಗ ಹಾಗೂ ಬ್ರೇಕ್ ವೈಫಲ್ಯದಿಂದ ಅನೇಕ ಅವಘಡಗಳು ಸಂಭವಿಸಿರುವುದನ್ನು ಉಲ್ಲೇಖಿಸಿದ ಅವರು, ಶಾಲಾ ವಾಹನಗಳ ಮೇಲೆ ಸೂಕ್ಷ್ಮ ನಿಗಾವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.