ರಾಯಚೂರ ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಕುಟುಂಬಗಳ ಮಧ್ಯೆ ಮಾರ ಮಾರಿ ನಡೆದಿರುವ ಘಟನೆ ನಡೆದಿದೆ. ಸೋಮವಾರ ಬೆಳಗಿನ ಜಾವ ರಾಯಚೂರು ನಗರದ ಗದ್ವಾಲ್ ರಸ್ತೆಯ ವೀರಾಂಜನೇಯ ದೇವಸ್ಥಾನ ಬಳಿ ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದು ನಂತರ ಮಾರಾಮಾರಿಗೆ ತಿರುಗಿದೆ. ಎರಡು ಕುಟುಂಬದವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಪೊಲೀಸರು ಆಗಮಿಸಿ ಜಗಳ ಬಿಡಿಸಲು ಹರಸಾಹಸ ಪಟ್ಟಿರುವ ಘಟನೆಯು ನಡೆಯಿತು. ರಾಯಚೂರಿನ ಮಾರ್ಕೆಟ್ ಎರಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.