ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಕನ್ನಡ ಪರ ಮತ್ತು ಹಿಂದೂ ಪರ ಸಂಘಟನೆಗಳ ನೇತೃತ್ವದಲ್ಲಿ ಹಿಂದೂ ಧರ್ಮ ಸಂರಕ್ಷಣಾ ಜಾಥಾ ನಡೆಯಿತು. ಜಾಥಾದಲ್ಲಿ ಹೂವಿನ ಶಿಗ್ಲಿ ವಿರಕ್ತಮಠದ ಶ್ರೀ ಚೆನ್ನವೀರ ಮಹಾಸ್ವಾಮಿಗಳು, ಬೆಳ್ಳಟ್ಟಿಯ ರಾಮಲಿಂಗೇಶ್ವರ ಮಠದ ಬಸವರಾಜ ಮಹಾಸ್ವಾಮಿಗಳು, ಗಂಜಿಗಟ್ಟಿ ವೈಜನಾಥ ಶಿವಲಿಂಗ ಶಿವಾಚಾರ್ಯರು, ಕುಮಾರ ಮಹಾರಾಜರು ಭಾಗಿಯಾಗಿದ್ದರು. ಪ್ರತಿಭಟನೆಯ ಜಾಥಾ ಪಟ್ಟಣದ ಹಾವಳಿ ಹನಮಂತ ದೇವಸ್ಥಾನದ ಆವರಣದಿಂದ ಪ್ರಾರಂಭವಾಗಿ ಬಜಾರ್ ರಸ್ತೆಯ ಮುಖಾಂತರ ಬಸ್ ನಿಲ್ದಾಣ ಎದುರು ಪ್ರತಿಭಟನಾ ಸಭೆ ನಡೆಯಿತು.