ಪ್ರತಿ ವರ್ಷ ಕೋಲಾರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿಗಾಗಿ ಆಗ್ರಹಿಸಿ ಗಣೇಶ ಉತ್ಸವ ಮಾಡಿಕೊಂಡು ಬಂದಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ ತಿಳಿಸಿದರು. ನಗರದ ಎಸ್ ಎನ್ ಆರ್ ಸರ್ಕಲ್ ನಲ್ಲಿ ಮಂಗಳವಾರ ಅಖಂಡ ಭಾರತ ವಿನಾಯಕ ಮಹಾ ಸಭಾ ವೇದಿಕೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋಲಾರ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು,ಕೋಲಾರ ಜಿಲ್ಲಾಧಿಕಾರಿಗಳು, ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಭೇಟಿ ನೀಡುತ್ತಾರೆ. ಪ್ರತಿವರ್ಷದಂತೆ ಈ ಬಾರಿಯೂ ವಿಶೇಷವಾಗಿ ಇಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ಮಾಡುತ್ತೇವೆ. ಬೇರೆ ರಾಜ್ಯಗಳಿಂದ ಹಾಗೂ ಜಿಲ್ಲೆಗಳಿಂದ ಕಲಾ ತಂಡಗಳು ಸಹ ಭಾಗವಹಿಸುತ್ತಾರೆ ಎಂದ್ರು.