ಮದ್ದೂರು ತಾಲ್ಲೂಕು ಕೆ.ಎಂ.ದೊಡ್ಡಿಯ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಕಡೆ ಶ್ರಾವಣ ಶನಿವಾರದ ಅಂಗವಾಗಿ ಶ್ರೀ ವೆಂಕಟೇಶ್ವರ ಸ್ವಾಮಿ ಮೂರ್ತಿಗೆ ತುಳಸಿ, ಹೂ ಮತ್ತು ಆಭರಣಗಳಿಂದ ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಪ್ರಧಾನ ಅರ್ಚಕ ನರಸಿಂಹಭಟ್ಟರ್ ಅವರ ನೇತೃತ್ವದಲ್ಲಿ ಶ್ರೀವೆಂಕಟೇಶ್ವರ ದೇವಾಲಯದ ಆವರಣದಲ್ಲಿ ನಡೆದ ಪೂಜಾಕಾರ್ಯಕ್ರಮದಲ್ಲಿ ನೂರಾರು ಭಕ್ತಾಧಿಗಳು ಭಾಗವಹಿಸಿ ಪೂಜೆ ಸಲ್ಲಿಸಿದರು. ಬೆಳಿಗ್ಗೆಯಿಂದ ರಾತ್ರಿಯವರೆವಿಗೂ ಭಕ್ತಾಧಿಗಳು ದೇವಾಲಯಕ್ಕೆ ಆಗಮಿಸಿ ದೇವರ ಮೂರ್ತಿಗೆ ತುಳಸಿ ಹಾಗೂ ವಿವಿಧ ಹೂಗಳನ್ನು ತಂದು ವಿಶೇಷ ಪೂಜೆಸಲ್ಲಿಸಿ ತಮ್ಮ ಕಷ್ಟಕಾರ್ಪಣ್ಯಗಳನ್ನು ಹೋಗಲಾಡಿಸುವಂತೆ ಬೇಡಿಕೊಂಡರು.