ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಭಾರತದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯರಾಣಿ ವೀರರಾಣಿ ಅಬ್ಬಕ್ಕ ಅವರ ಐದುನೂರನೇ ಜಯಂತೋತ್ಸವದ ಪ್ರಯುಕ್ತವಾಗಿ ರಾಣಿ ಅಬ್ಬಕ್ಕ ರಥಯಾತ್ರೆಯ ಅಂಗವಾಗಿ ಚಿಕ್ಕಮಗಳೂರು ನಗರದಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡು ಮೆರವಣಿಗೆ ಹಾಗೂ ಹೃದಯತ್ರೆಯನ್ನು ಯಶಸ್ವಿಗೊಳಿಸಿದರು.