ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಶಿಗ್ಗಾವಿ-ಸವಣೂರು ಶಾಸಕ ಯಾಸೀರ್ ಖಾನ್ ಪಠಾಣ್ ಹೇಳಿದರು. ಸವಣೂರ ತಾಲೂಕು ಹುರುಳಿಕುಪ್ಪಿ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ಕು.ಧನುಷ ಅಜ್ಜಣ್ಣವರ "ವೇಟ್ ಲಿಪ್ಟಿಂಗ್" ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಅವರು ಮಾತನಾಡಿದರು.