ಸ್ವಕ್ಷೇತ್ರ ಸೇಡಂನಲ್ಲಿ ಸಂಚಾರ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಇತ್ತೀಚಿಗೆ ಹೈದರಾಬಾದ್‌ನಲ್ಲಿ ಸಾವಿಗೀಡಾದ ರಂಜೋಳ ಮತ್ತು ಅನಂತಪುರ ಗ್ರಾಮದ ಕುಟುಂಬಗಳಿಗೆ ಸಾಂತ್ವನ ಹೇಳಿ ಸಹಾಯಧನ ನೀಡಿದರು. ಇನ್ನು ಸೇಡಂ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಕುರಿತು ಚರ್ಚೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.