ಕಳೆದ ಕೆಲವು ವರ್ಷಗಳಿಂದ ಪ್ರತಿವರ್ಷದ ಮಳೆಗಾಲದಲ್ಲಿ ಸರ್ಕಾರಿ ಉರ್ದು ಶಾಲೆ, ಕೊಠಡಿಗಳು ಸೋರುತ್ತಿರುವ ಕಾರಣ ಪಾಠ ಪ್ರವಚನ ಮಾಡುವುದು ಮತ್ತು ಅಡುಗೆ ಸಿದ್ಧಪಡಿಸುವುದು ಕಷ್ಟ ಸಾಧ್ಯವಾಗುತ್ತಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಂಜುಮ್ ತಬಸುಮ್ ಅವರು ಶುಕ್ರವಾರ ಮಧ್ಯಾಹ್ನ 1ಕ್ಕೆ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.