ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಧಾನಸೌಧದ ಸಭಾಂಗಣದಲ್ಲಿ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಿದ್ದು, ಮುಖ್ಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು.