ಹಾಸನ: ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಸಂಭವಿಸಿದ ಭೀಕರ ಟ್ರಕ್ ಅಪಘಾತದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಶನಿವಾರ ಹಾಸನ ಹಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಮೃತರಿಗೆ ತಮ್ಮ ಪಕ್ಷದಿಂದಲೂ ಪರಿಹಾರ ಘೋಷಿಸಿದರು. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿ, ನನಗೆ ಯಾವುದೇ ರಾಜಕೀಯ ಭ್ರಮೆ ಇಲ್ಲ. ನನಗಿದ್ದಷ್ಟೂ ಶಕ್ತಿ ಇದ್ದರೆ ಕೆಲಸ ಮಾಡುತ್ತೇನೆ. ರಾಜಕೀಯ ನಿವೃತ್ತಿ ಅಂತಾ ಎಂದೂ ನಾನು ಹೇಳಿಲ್ಲ. ಮೊನ್ನೆ ಎನ್‌ಡಿಎ ಸಭೆಯಲ್ಲಿ ಪ್ರಧಾನಮಂತ್ರಿಯವರೇ ಬಂದು ಕೈಕುಲಿಕಿಸಿ, ತಮ್ಮ ಭಾಷಣದಲ್ಲಿ ನನ್ನ ಹೆಸರು ಪ್ರಸ್ತಾಪಿಸಿದರು.ನನ್ನ ಕೆಲಸ ಇ