ರಾಜ್ಯ ಸರ್ಕಾರ ಬ್ಯಾಕ್ ಲಾಕ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿ, ವಿಜಯಪುರ ನಗರದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಬೃಹತ್ ಪ್ರತಿಭಟನೆ ಮಾಡಿದರು. ರಾಜ್ಯ ಸರ್ಕಾರ ಕೂಡಲೇ ಬ್ಯಾಕ್ ಲಾಕ್ ಹುದ್ದೆಗಳನ್ನು ಭರ್ತಿ ಮಾಡಿ ನಿರುದ್ಯೋಗ ಯುವಕರಿಗೆ ಉದ್ಯೋಗ ಕಲ್ಪಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿ, ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಬೃಹತ್ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಕೂಡಲೇ ಸರ್ಕಾರ ಬ್ಯಾಕ್ ಲಾಕ್ ಹುದ್ದೆಗಳನ್ನು ಭರ್ತಿ ಮಾಡಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ಇನ್ನೂ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು