ಮಳವಳ್ಳಿ : ತಾಲ್ಲೂಕಿನ ನೆಲ್ಲೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2025-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಗುರುವಾರ ಏರ್ಪಾಡಾಗಿತ್ತು. ಸಾಯಂಕಾಲ 4.30 ರ ಸಮಯ ದಲ್ಲಿ ನಡೆದ ಈ ಸಭೆಯಲ್ಲಿ ವಾರ್ಷಿಕ ವರದಿ ಮಂಡಿಸಿದ ಮುಖ್ಯ ಕಾರ್ಯ ನಿರ್ವಾಹಣಾಧಿ ಕಾರಿ ನಂಜುಂಡೇಗೌಡ ಅವರು ಸಂಘವು 2024-25 ನೇ ಸಾಲಿನಲ್ಲಿ 9.10.550ರೂ ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮನ್ ಮುಲ್ ನಿರ್ಧೇಶಕ ಡಿ ಕೃಷ್ಣೇಗೌಡ ಅವರು ಶಾಸಕ ಪಿ ಎಂ ನರೇಂದ್ರ ಸ್ವಾಮಿ ಅವರ ಮಾರ್ಗದರ್ಶನ ದಂತೆ ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕರ ಸಮಸ್ಯೆಗಳನ್ನು ಅರಿತುಕೊಂಡು ಬಗೆಹರಿಸುವ ಪ್ರಯತ್ನ ನಡೆಸುವುದಾಗಿ ತಿಳಿಸಿದರು.