ದಾಂಡೇಲಿ: ಮಳೆಯ ಕಾರಣದಿಂದ ದಾಂಡೇಲಿ ಸುತ್ತಮುತ್ತಲ ಪ್ರವಾಸಿ ತಾಣಗಳಲ್ಲಿ ಜಲ ಸಂಬಂಧಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದರಿಂದ ಇದನ್ನೆ ನಂಬಿಕೊಂಡುರುವ ಸಾವಿರಾರು ಕುಟುಂಬಗಳು ಸಂಕಷ್ಟವನ್ನೆದುರಿಸುತ್ತಿವೆ. ಕೂಡಲೇ ಈ ಪ್ರವಾಸೋದ್ಯಮ ಉತ್ತೇಜಿಸಲು ಹಾಗೂ ಇದನ್ನೆ ನಂಬಿರುವ ಕುಟುಂಬಗಳ ಹಿತದೃಷ್ಟಿಯಿಂದ ಜಲ ಸಂಬಂಧಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಈ ಕೂಡಲೆ ಆರಂಭಿಸುವಂತೆ ಡಿವೈಎಫ್ಐ ರಾಜ್ಯ ಸಮಿತಿಯ ಸದಸ್ಯ ಡಿ.ಸ್ಯಾಮಸನ್ ಅವರು ಒತ್ತಾಯಿಸಿದ್ದಾರೆ. ಅವರು ಇಂದು ಭಾನುವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ದಾಂಡೇಲಿ ನಗರದಲ್ಲಿ ಮಾಧ್ಯಮದ ಮೂಲಕ ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.