ಜಲಜೀವನ್ ಮಿಷನ್ ಯೋಜನೆಯಡಿ ೬೭ ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆಕೋಲಾರ : ಜಲಜೀವನ್ ಮಿಷನ್ ಯೋಜನೆ ಪ್ರತಿ ಮನೆಗೂ ನಳದ ಮೂಲಕ ನೀರು ನೀಡುವ ಮಹತ್ವಾಂಕ್ಷಿ ಯೋಜನೆಯಾಗಿದ್ದು, ಗುಣಮಟ್ಟ ಕಾಯ್ದುಕೊಳ್ಳಿ, ಲೋಪಗಳಿಗೆ ಅವಕಾಶ ನೀಡದಿರಿ ಎಂದು ಸೂಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್ ಸೂಚನೆ ನೀಡಿದರು. ತಾಲೂಕಿನ ಚಲ್ಲಹಳ್ಳಿ ಗ್ರಾಮದಲ್ಲಿ ಸೂಲೂರು ಗ್ರಾಮ ಪಂಚಾಯಿತಿ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅತಿ ಪ್ರಮುಖ ಕಾರ್ಯಕ್ರಮವಾದ ಜಲಜೀವನ್ ಮಿಷನ್ನ ೬೭ ಲಕ್ಷ ರೂ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಕೇಂದ್ರ ಸರ್ಕಾರ ಪ್ರತಿ ಮನೆಗೂ ನಳದ ಮೂಲಕ ನೀರು ಒದಗಿಸುವ ಪ್ರಯತ್ನವಾಗಿ ರಾಷ್ಟ್ರವ್ಯಾಪಿ ಈ ಯೋಜನೆ ಜಾ