ಈ ಸಮಾಜದಲ್ಲಿ ಜಾತಿ ಜಾತಿ ಮತ್ತು ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತಿ ಸಾಮರಸ್ಯವನ್ನು ಹಾಳು ಮಾಡುವ ಅದು ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಯಾರೇ ಆಗಿರಲಿ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಿ ಸಮಾಜದ ಸ್ವಾಸ್ಥö್ಯವನ್ನು ಹಾಳು ಮಾಡುವವರಿಗೆ ಎಚ್ಚರಿಕೆ ಸಂದೇಶ ನೀಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರು ಶಿಡ್ಲಘಟ್ಟದಲ್ಲಿ ತಿಳಿಸಿದರು.ಶಿಡ್ಲಘಟ್ಟ ನಗರದ ಬಿಜೆಪಿ ಸೇವಾ ಸೌಧ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರು ಮಾಧ್ಯಮಗೋಷ್ಠಿ ನಡೆಸಿ ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ದ ನಡೆದಿರುವ ಷಡ್ಯಂತ್ರದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಒತ್ತಾಯಿಸಿದರು.