ಆರೋಗ್ಯ ಕಾಪಾಡಲು ಕ್ರೀಡೆ ಒಂದು ಅಸ್ತ್ರವಾಗಿದೆ ಶಾಸಕ ಕೆ.ವೈ ನಂಜೇಗೌಡ ಮಾಲೂರು ನಗರದ ಹೋಂಡಾ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಯಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಕೋಮುಲ್ ಅಧ್ಯಕ್ಷರಾದ ಶ್ರೀ ಕೆ ವೈ ನಂಜೇಗೌಡರವರು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ಮಾತನಾಡಿದ್ದಾರೆ ಕ್ರೀಡೆಗಳು ಮನುಷ್ಯನ ಆರೋಗ್ಯ ಕಾಪಾಡುವ ಅಸ್ತ್ರವಾಗಿದೆ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ಸಾಧನೆಗಳನ್ನು ಮಾಡಬೇಕೆಂದು ಅವರು ಕರೆ ನೀಡಿದ್ದಾರೆ