ಮದ್ದೂರು ತಾಲ್ಲೂಕು ಭಾರತೀನಗರದ ಸಮುದಾಯ ಆರೋಗ್ಯ ಕೇಂದ್ರವನ್ನು ಉನ್ನತೀಕರಣಗೊಳಿಸಲು ಸರ್ಕಾರದೊಂದಿಗೆ ಚರ್ಚಿಸುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು. ಭಾರತೀನಗರ ಸಮುದಾಯ ಆರೋಗ್ಯಕೇಂದ್ರದಲ್ಲಿ ನಡೆದ ರಕ್ಷಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಭಾರತೀನಗರ ಸುತ್ತಮುತ್ತಲ ಹಳ್ಳಿಗಳಿಗೆ ಕೇಂದ್ರ ಸ್ಥಳವಾಗಿರುವುದರಿಂದ ಇದನ್ನು ಉನ್ನತೀಕರಣಗೊಳಿಸಲು ಸರ್ಕಾರದೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಜೊತೆಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಈಗಾಗಲೇ ಕ್ರಮಕೈಗೊಂಡಿದ್ದೇವೆ. ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗದ ರೀತಿ ನೋಡಿಕೊಳ್ಳುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇನೆ ಎಂದರು. ಗ್ರಾಮಾಂತರ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕೆಂಬುವುದು ನನ್ನ ಆಸೆಯಾಗಿದೆ. ಇಲ್ಲಿ ಶ