ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪೊನ್ನಂಪೇಟೆ ತಾಲೂಕಿನ ನೂತನ ಕಚೇರಿಯನ್ನು ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಉದ್ಘಾಟಿಸಿದರು.ಬಳಿಕ ಮಾತನಾಡಿದ ಶಾಸಕರು, ಒಂದು ಶತಮಾನಕ್ಕೂ ಅಧಿಕ ಇತಿಹಾಸವುಳ್ಳ ಈ ಸ್ವಯಂ ಸೇವಕ ಸಂಸ್ಥೆಯು, ನಾಗರೀಕ ಸೇವೆಯಲ್ಲಿ, ಸಮಾಜಕ್ಕೆ ಒದಗಿದ ವಿವಿಧ ಸಂಕಷ್ಟದ ಸಮಯದಲ್ಲಿ ಹಾಗೂ ಶೋಷಿತ ಸಮಾಜದ ಪರ ಕೆಲಸ ಮಾಡುವಲ್ಲಿ ಮುಂಚೂಣಿಯಲ್ಲಿದೆ. ಪ್ರಪಂಚದಾದ್ಯಂತ ಉತ್ತಮ ಹೆಸರು ಮಾಡಿರುವ ಈ ಸಂಸ್ಥೆಯ ಪೊನ್ನಂಪೇಟೆ ಘಟಕವು ಯಶಸ್ಸು ಕಾಣುತ್ತಾ, ಜನಮನದಲ್ಲಿ ಛಾಪು ಮೂಡಿಸಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರು,ಉಪಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು,