ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೂಬಸ್ಥ ಮಾಡಲಾಗಿದೆ ಎಂದು ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ .ನಗರದಲ್ಲಿ ಮಾತನಾಡಿದ ಅವರು ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ ಬಂದೂಬಸ್ಥ ಮಾಡಲಾಗಿದ್ದು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ ಅವಳಿ ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದ್ದು. ಯಾರಾದ್ರು ಶಾಂತಿ ಕದಡಿದ್ರೆ ಕಠೀಣ ಕ್ರಮ ಕೈಗೊಳ್ಳುತ್ತೇವೆ ಎಂದರು. ಅವಳಿ ನಗರದ ಹಲವಡೆ ಸಿಸಿಟಿವಿ ಕ್ಯಾಮರಾ ಹಾಕಲಾಗಿದೆ.ಡ್ರೋಣ್ ಗಳನ್ನು ಕೂಡಾ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.