ಕೊಪ್ಪಳ ಜಿಲ್ಲೆಯು ಐತಿಹಾಸಿಕ ಪ್ರವಾಸಿ ತಾಣಗಳನ್ನು ಹೊಂದಿದ್ದು, ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಗುರುತಿಸಬೇಕು ಹಾಗೂ ಅವುಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಹಮ್ಮಿಕೊಂಡಿದ್ದ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಮೊದಲನೇ ಹಂತದಲ್ಲಿ ಮಂಜೂರಾಗಿರುವ ಹಾಗೂ ಎರಡನೇ ಹಂತದಲ್ಲಿ ಅನುಮೋದನೆಯಾಗಿರುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು 93 ಎಕರೆ 15 ಗುಂಟೆ ಭೂಸ್ವಾಧೀನ