ಯಾದಗಿರಿ ಜಿಲ್ಲೆಯ ಸುರಪುರ ನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದ ಹಿಂಭಾಗದಲ್ಲಿನ ಖಾರಿಜ್ ಖಾತಾ ಭೂಮಿಯನ್ನು ಅಂಬೇಡ್ಕರ್ ಹೆಸರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮಂಜೂರು ಮಾಡುವಂತೆ ಆಗ್ರಹಿಸಿ ಹುಣಸಗಿ ಪಟ್ಟಣದ ತಹಸೀಲ್ದಾರ್ ಕಚೇರಿಯ ಮುಂದೆ ಶುಕ್ರವಾರ ಮಧ್ಯಾನ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಲಾಯಿತು.ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.