ಮಹಿಳೆಯರ ಮೇಲಿನ ದೌರ್ಜನ್ಯ, ಅಶ್ಲೀಲತೆ, ಮದ್ಯಪಾನದ ಹಾವಳಿಯ ವಿರುದ್ಧ ದೇಶವ್ಯಾಪಿ ಪ್ರತಿಭಟನಾ ಸಪ್ತಾಹದ ಭಾಗವಾಗಿ ಎಐಎಂಎಸ್ ಎಸ್ ಕೊಪ್ಪಳ ಜಿಲ್ಲಾ ಸಂಘಟನಾ ಸಮಿತಿ ವತಿಯಿಂದ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ಇಂದು ನಡೆಯಿತು. ಸೆಪ್ಟೆಂಬರ್ 04 ರಂದು ಮಧ್ಯಾಹ್ನ 2-00 ಗಂಟೆಗೆ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಎಐಎಂ ಎಸ್ ಎಸ್ ನ ಜಿಲ್ಲಾ ಕಾರ್ಯದರ್ಶಿ ಶಾರದಾ ಮಾತನಾಡುತ್ತಾ "ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಯು ದೇಶದಾದ್ಯಂತ ಮಹಿಳೆಯರ ಹಕ್ಕುಗಳಿಗಾಗಿ, ಮಹಿಳೆಯರ ಘನತೆಯ ಬದುಕಿಗಾಗಿ ಶ್ರಮಿಸುತ್ತಿದೆ. ಹಳೆಯ ಊಳಿಗಮಾನ್ಯ ವ್ಯವಸ್ಥೆಯ ಪುರುಷ ಪ್ರಧಾನ ಮೌಲ್ಯಗಳ ಜೊತೆಗೆ ಇಂದಿನ ಹೆಣ್ಣು ಭೋಗದ ವಸ್ತು ಎಂಬಂತೆ ಎಂದು ಆರೋಪ