ಬಸವಕಲ್ಯಾಣ: ಹೈವೆ ರಸ್ತೆಯಲ್ಲಿ ವೇಗವಾಗಿ ಚಲಿಸುತಿದ್ದ ಬುಲೆರೋ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಒರ್ವ ವ್ಯಕ್ತಿಗೆ ಗಂಭೀರವಾಗಿ ಗಾಯಗಳಾದ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-65ರ ಮೇಲಿರುವ ತಡೋಳಾ ಗ್ರಾಮದ ಸಮೀಪ ಜರುಗಿದೆ. ಘಟನೆಯಲ್ಲಿ ಗಾಯಗೊಂಡ ಬುಲೆರೋ ವಾಹನದ ಚಾಲಕನಿಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸುದ್ದಿ ತಿಳಿದ ಸಂಚಾರಿ ಠಾಣೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದು, ತನಿಖೆ ಮುಂದುವರೆದಿದೆ