ರಾಷ್ಟ್ರದಲ್ಲಿ ಬಿಜೆಪಿ ನಡೆಸುತ್ತಿರುವ ಮತಗಳ್ಳತನ ಬಗ್ಗೆ ಸಂಘಟಿತ ಹೋರಾಟ ಮಾಡಲು ಕಾಂಗ್ರೆಸ್ ಸೇವಾದಳವನ್ನು ಸಜ್ಜುಗೊಳಿಸಲಾಗುತ್ತಿದ್ದು, ವಿರೋಧ ಪಕ್ಷದ ನಾಯಕರಾದ ರಾಹುಲ್‌ಗಾಂಧಿ ಅವರ ಕೈ ಬಲಪಡಿಸಲು ಸೇವಾದಳ ಸಂಪೂರ್ಣವಾಗಿ ಬೆಂಬಲ ನೀಡುತ್ತಿದೆೆ ಎಂದು ಕಾಂಗ್ರೆಸ್ ಸೇವಾದಳದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ತಿಳಿಸಿದರು. ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸೇವಾದಳ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.