ನನಗೆ ಮಕ್ಕಳ ಸೇವೆ ಮತ್ತು ಶಿಕ್ಷಕರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಅದನ್ನು ಸಂಪೂರ್ಣವಾಗಿ ಸಮುದಾಯದ ಕಲ್ಯಾಣಕ್ಕೆ ಬಳಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶನಿವಾರ ಮಧ್ಯಾಹ್ನ 2 ಗಂಟೆಗೆ ಸೊರಬ ಪಟ್ಟಣದ ರಂಗಮಂದಿರದಲ್ಲಿ ಸರ್ವಪಲ್ಲಿ ಡಾ.ರಾಧಾಕೃಷ್ಣನ್ ಅವರ 138ನೇ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವ ಪೀಳಿಗೆಯನ್ನು ದೇಶದ ಮೌಲ್ಯಭರಿತ ವ್ಯಕ್ತಿಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಹೊತ್ತ ಶಿಕ್ಷಕರು ಸಮಾಜದ ಆಸ್ತಿ ಇದ್ದಂತೆ ಎಂದರು