ಹೆಬ್ಬಾಳ ಗ್ರಾಮಕ್ಕೆ ಸರ್ವಿಸ್ ರಸ್ತೆ ನಿರ್ಮಾಣ ಕುರಿತು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು. ಹುಕ್ಕೇರಿ ತಾಲೂಕಿನ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹೆಬ್ಬಾಳ ಗ್ರಾಮದ ಸಮೀಪ, ರಾಷ್ಟ್ರೀಯ ಹೆದ್ದಾರಿಯಿಂದ ಹೆಬ್ಬಾಳ ಗ್ರಾಮಕ್ಕೆ ಸರ್ವಿಸ್ ರಸ್ತೆ ನಿರ್ಮಾಣ ಕುರಿತು ಭಾನುವಾರ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಗತ್ಯವಾದ ಸೂಚನೆಗಳನ್ನು ನೀಡಿದರು ಈ ಸಂದರ್ಭದಲ್ಲಿ ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಗ್ರಾಮಸ್ಥರು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿ, ಸಮಸ್ಯೆ ಶೀಘ್ರದಲ್ಲೇ ಬಗೆಹರಿಸಲಾಗುವುದು