ಹಾಸನ: ಈ ಕಾಲ ಸರಕಾರಿ ನೌಕರರ ಕಾಲವಲ್ಲ, ಬದಲಾಗಿ ಸ್ವಂತ ಉದ್ಯೋಗ ಮಾಡುತ್ತೇವೆ ಎಂದು ಯಾರು ಹೊರಡುತ್ತಾರೋ ಅವರಿಗಿದು ಸೂಕ್ತ ಕಾಲ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ. ತಿಳಿಸಿದರು. ಜಿಪಂ ಹೊಯ್ಸಳ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಕೆಪೆಕ್ ಲಿಮಿಟೆಡ್ ಇವರ ಜಂಟಿ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.