ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿಜಯಪುರ ಪೊಲೀಸ್ ಇಲಾಖೆ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ವಿಜಯಪುರ ನಗರದ ಗಾಂಧಿ ಚೌಕ ಬಸವೇಶ್ವರ ವೃತ್ತ ರಸ್ತೆ ಹಾಗೂ ಬಿಎಲ್ಡಿಇ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸೋಮವಾರ ಸಾಯಂಕಾಲ 5ಗಂಟೆ ಸುಮಾರಿಗೆ ರೂಟ್ ಮಾರ್ಚ್ ನಡೆಸಿ, ಗಣೇಶ್ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬವನ್ನು ಸಾರ್ವಜನಿಕರು ಶಾಂತಿಯುತವಾಗಿ ಆಚರಿಸಬೇಕು ಎಂದು ಸೂಚನೆ ನೀಡಿದರು.