ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ 110/33/11 ಕೆ ವಿ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10 ಮತ್ತು 11 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ಇಲಾಖೆಯ ಪ್ರಭಾರಿ ಎ ಇ ಇ ವೆಂಕಟೇಶ ಚಿಲಕರಾಗಿ ತಿಳಿಸಿದ್ದಾರೆ. ಈ ಕುರಿತು ಮಂಗಳವಾರ ಮಧ್ಯಾನ ಪ್ರಕಟಣೆ ಹೊರಡಿಸಿ, ಸೆಪ್ಟೆಂಬರ್ ಹತ್ತರಂದು ದೇವದುರ್ಗ ಪಟ್ಟಣದ 23 ವಾರ್ಡ್ ಗಳು ಹಾಗೂ ವಿವಿಧ ಗ್ರಾಮಗಳು ಸೆಪ್ಟೆಂಬರ್ 11ರಂದು ಜಾಲಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ ಎಂದು ತಿಳಿಸಿದ್ದಾರೆ.