ಮತಪಟ್ಟಿಯ ವಿಶೇಷ ಪರಿಷ್ಕರಣೆ ಕೈಬಿಡುವಂತೆ ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗ ವಿರುದ್ಧ ಧಾರವಾಡ ನಗರದ ವಿವೇಕಾನಂದ ವೃತ್ತದಲ್ಲಿ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸಿದರು. ದುಡಿಯುವ ಜನರ ಮೂಲಭೂತ ಹಕ್ಕುಗಳಿಗೆ ಸಂಚಕಾರ ತಂದಿರುವ ಹಾಗೂ ದೇಶದಲ್ಲಿ ಅತ್ಯಂತ ವಿವಾದಕ್ಕೆ ಒಳಗಾದಂತಹ ವಿಶೇಷ ಮತಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಕೂಡಲೇ ಕೇಂದ್ರ ಚುನಾವಣಾ ಆಯೋಗ ಕೈಬಿಡಬೇಕು.