Download Now Banner

This browser does not support the video element.

ಚಿತ್ರದುರ್ಗ: ಚಿತ್ರದುರ್ಗ ಕೆ.ಇ.ಬಿ. ಸಮುದಾಯ ಭವನದಲ್ಲಿ ಸಚಿವ ಡಿ.ಸುಧಾಕರ್ ಅವರಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಉದ್ಘಾಟನೆ

Chitradurga, Chitradurga | Sep 5, 2025
ಚಿತ್ರದುರ್ಗ ನಗರದ ಕೆ.ಇ.ಬಿ ಸಮುದಾಯ ಭವನದಲ್ಲಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಶಿಕ್ಷಕರ ದಿನಾಚರಣೆ-ಡಾ.ಸರ್ವೆಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನೋತ್ಸವ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಒಂದು ದೇಶ ಅಭಿವೃದ್ಧಿಯಾಗಬೇಕಾದರೆ ಆ ದೇಶದ ಮಾನವ ಸಂಪನ್ಮೂಲ ಸಂಪದ್ಭರಿತವಾಗಿರಬೇಕು. ಈ ಸಂಪದ್ಭರಿತ ಮಾನವ ಸಂಪನ್ಮೂಲದ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
Read More News
T & CPrivacy PolicyContact Us