ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಪ್ರಾಯಪಟ್ಟರು. ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಏರ್ಪಡಿಸಿದ್ದ ಪತ್ರಿಕಾ ವಿತರಕರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ.